ADVERTISEMENT

ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಭಾಗಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 8:16 IST
Last Updated 7 ಮಾರ್ಚ್ 2021, 8:16 IST
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಉಸ್ತುವಾರಿ ಕೈಲಾಸ್ ವಿಜಯವರ್ಗೀಯ ಅವರನ್ನು ಮಿಥುನ್ ಚಕ್ರವರ್ತಿ ಶನಿವಾರ ಸಂಜೆ ಭೇಟಿಯಾಗಿದ್ದರು - ಪಿಟಿಐ ಚಿತ್ರ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಉಸ್ತುವಾರಿ ಕೈಲಾಸ್ ವಿಜಯವರ್ಗೀಯ ಅವರನ್ನು ಮಿಥುನ್ ಚಕ್ರವರ್ತಿ ಶನಿವಾರ ಸಂಜೆ ಭೇಟಿಯಾಗಿದ್ದರು - ಪಿಟಿಐ ಚಿತ್ರ   

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಭಾನುವಾರ ಬಿಜೆಪಿ ಸೇರ್ಪಡೆಯಾದರು.

ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರ್‍ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ರ್‍ಯಾಲಿ ಇದಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಉಸ್ತುವಾರಿ ಕೈಲಾಸ್ ವಿಜಯವರ್ಗೀಯ ಅವರನ್ನು ಮಿಥುನ್ ಚಕ್ರವರ್ತಿ ಶನಿವಾರ ಸಂಜೆ ಭೇಟಿಯಾಗಿದ್ದರು.

ಕೋಲ್ಕತ್ತದ ಮೈದಾನ್ ಪ್ರದೇಶದ ಬ್ರಿಗೇಡ್ ಪರೇಡ್ ಗ್ರೌಂಡ್ಸ್‌ನಲ್ಲಿ ಮೋದಿ ರ‍್ಯಾಲಿ ನಡೆಯಲಿದ್ದು, 10 ಲಕ್ಷ ಜನ ಸೇರಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.