
ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಧುರಂಧರ್ ಚಿತ್ರ ನಟ ನದೀಮ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾಗಿದ್ದ 'ಧುರಂಧರ್' ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನದೀಮ್ ಖಾನ್‌ನನ್ನು 41 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಿದ್ದು, ಪ್ರಸ್ತುತ ಕಸ್ಟಡಿಯಲ್ಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
'ನದೀಮ್ ಖಾನ್ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ 10 ವರ್ಷಗಳ ಕಾಲ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ' ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮದುವೆ ಆಗುವಂತೆ ನದೀಮ್‌ನನ್ನು ಕೇಳಿದಾಗ ಆತ ನಿರಾಕರಿಸಿದನು ಎಂದೂ ಸಂತ್ರಸ್ತೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.