ನಟ, ರಾಜಕಾರಣಿ ವಿಜಯ್
ಚೆನ್ನೈ: ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ನಟ, ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇಂದು (ಶುಕ್ರವಾರ) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದೆ.
ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್.ಆನಂದ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
‘ವಕ್ಫ್ ಮಸೂದೆಯನ್ನು ತಿರಸ್ಕರಿಸೋಣ’, ‘ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳಬೇಡಿ’ ಮತ್ತು ‘ಅಲ್ಪಸಂಖ್ಯಾತರಿಗೆ ದ್ರೋಹ ಮಾಡಬೇಡಿ’ ಎಂಬ ಘೋಷಣೆಗಳನ್ನು ಕೂಗುತ್ತ ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು. ಮಸೂದೆ ಅಂಗೀಕಾರದೊಂದಿಗೆ ವಕ್ಫ್ ಆಸ್ತಿಗಳಿಗೆ ಕೇಂದ್ರ ಬೆದರಿಕೆ ಒಡ್ಡುತ್ತದೆ. ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ.
ಮಧುರೈ, ಕೊಯಮತ್ತೂರು, ತಿರುಚಿರಾಪಳ್ಳಿ, ತೂತುಕುಡಿ ಮತ್ತು ತಂಜಾವೂರುಗಳಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.