ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಹು ಭಾಷಾ ನಟ ಪ್ರಕಾಶ್ ರಾಜ್, ಅಮೆರಿಕದ ದ್ವಂದ್ವ ನೀತಿಯನ್ನು ಟೀಕಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ.
‘ಪಾಕಿಸ್ತಾನದೊಳಗೆ ನುಗ್ಗಿ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್‌ನನ್ನು ಕೊಲ್ಲುವ ಮೂಲಕ ಅಮೆರಿಕ ನ್ಯಾಯ ದೊರಕಿಸಿಕೊಂಡಿತ್ತು. ಆದರೆ, ನಾವು ಹಾಗೆ ಮಾಡಲು ಹೊರಟಾಗ ‘ಕದನ ವಿರಾಮ’ ಘೋಷಿಸಲಾಯಿತು’ ಎಂದು ಹೇಳಿದ್ದಾರೆ.
ಅಮೆರಿಕ ಮಧ್ಯಸ್ಥಿಕೆಯಲ್ಲಿ ಶನಿವಾರ ನಡೆದ ಉಭಯ ರಾಷ್ಟ್ರಗಳ ಮಿಲಿಟರಿ ನಾಯಕರ ಸಭೆ ನಂತರ ಕದನ ವಿರಾಮ ಘೋಷಿಸಲಾಯಿತು.
ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಚರಣೆ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಉದ್ವಿಗ್ನಗೊಂಡಿತ್ತು. ಪಹಲ್ಗಾಮ್ ಉಗ್ರರ ದಾಳಿಯಲ್ಲಿ 22 ಭಾರತೀಯರು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.