ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರುಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಮುಂಬೈನ ನಿವಾಸದಲ್ಲಿ ಬುಧವಾರ ಭೇಟಿಯಾದರು. ಈ ಭೇಟಿಯ ಕಾರಣ ಇನ್ನೂ ತಿಳಿದು ಬಂದಿಲ್ಲ.
ಕಳೆದ ವಾರ ಬೃಹತ್ ಮುಂಬೈ ಮಹಾನಗರ ಪಾಲಿಕೆಯು(ಬಿಎಂಸಿ) ಸೋನು ಸೂದ್ ವಿರುದ್ಧ ವಸತಿ ಕಟ್ಟಡವನ್ನು ಅನುಮತಿಯಿಲ್ಲದೆ ಹೋಟೆಲ್ ಆಗಿ ಪರಿವರ್ತಿಸಿದ ಆರೋಪದಡಿ ಎಫ್ಐಆರ್ ದಾಖಲಿಸುವಂತೆ ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಈ ಸಂಬಂಧ ಸೋನು ಸೂದ್ ಅವರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇದರ ಬೆನ್ನಲ್ಲೇ ಸೋನು ಸೂದ್ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದು, ಇದು ಬಹಳ ಚರ್ಚೆಗೆ ಗ್ರಾಸವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.