ADVERTISEMENT

ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆಗೆ ಆಗ್ರಹ

ನ್ಯಾಯಮೂರ್ತಿ ಸುಬ್ರಮಣಿಯಂ ಅವರಿಂದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪತ್ರ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 18:13 IST
Last Updated 14 ಸೆಪ್ಟೆಂಬರ್ 2020, 18:13 IST
ಸೂರ್ಯ
ಸೂರ್ಯ   

ಚೆನ್ನೈ: ‘ತಮ್ಮ ಜೀವಕ್ಕೆ ಹೆದರಿ ನ್ಯಾಯಾಧೀಶರುಗಳು ವಿಡಿಯೊ ಕಾನ್ಫರೆನ್ಸ್‌ ಮುಖಾಂತರ ವಿಚಾರಣೆ ನಡೆಸುತ್ತಿದ್ದಾರೆ’ ಎಂಬ ಹೇಳಿಕೆ ನೀಡಿರುವ ತಮಿಳು ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಪಿ.ಸಾಹಿಅವರಿಗೆ ಪತ್ರ ಬರೆದಿದ್ದಾರೆ.

‘ಜೀವಕ್ಕೆ ಹೆದರಿ ನ್ಯಾಯಾಂಗ ವ್ಯವಸ್ಥೆಯೇ ವಿಡಿಯೊ ಕಾನ್ಫರೆನ್ಸ್‌ ಮುಖಾಂತರ ವಿಚಾರಣೆ ನಡೆಸುತ್ತಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ಪರೀಕ್ಷೆ ಬರೆಯಲು ಬನ್ನಿ ಎಂದು ವಿದ್ಯಾರ್ಥಿಗಳಿಗೆ ಸೂಚಿಸುತ್ತಿದೆ’ ಎಂದು ನೀಟ್‌ ಪರೀಕ್ಷೆಯನ್ನು ಖಂಡಿಸಿ, ಭಾನುವಾರ ಪ್ರಕಟಣೆಯೊಂದನ್ನು ಸೂರ್ಯ ಹೊರಡಿಸಿದ್ದರು.

ಭಾನುವಾರ ರಾತ್ರಿಯೇ ಈ ಕುರಿತು ಸಾಹಿ ಅವರಿಗೆ ಪತ್ರ ಬರೆದಿರುವ ನ್ಯಾಯಮೂರ್ತಿ ಎಸ್‌.ಎಂ.ಸುಬ್ರಮಣಿಯಂ, ‘ಈ ಹೇಳಿಕೆಯು ನ್ಯಾಯಾಂಗ ನಿಂದನೆ ಆಗುತ್ತದೆ. ದೇಶದ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಂಗ ವ್ಯವಸ್ಥೆಯ ಸಮಗ್ರತೆ ಮತ್ತು ಶ್ರದ್ಧೆಯನ್ನು ಇದು ಟೀಕಿಸಿದಂತಿದೆ ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಬೇಕು’ ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.