ನವದೆಹಲಿ: ಉತ್ತರ ಪ್ರದೇಶಕ್ಕೆ 1,500 ಮೆಗಾವಾಟ್ ವಿದ್ಯುತ್ ಪೂರೈಸುವ ಗುತ್ತಿಗೆಯು ಅದಾನಿ ಪವರ್ ಕಂಪನಿಯ ಪಾಲಾಗಿದೆ. ಪ್ರತಿ ಯೂನಿಟ್‌ಗೆ ₹5.38 ದರದಲ್ಲಿ 25 ವರ್ಷದವರೆಗೆ ವಿದ್ಯುತ್ ಪೂರೈಸುವ ಯೋಜನೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶ ವಿದ್ಯುತ್ ಕಾರ್ಪೊರೇಷನ್ ಲಿಮಿಟೆಡ್ (ಯುಪಿಪಿಸಿಎಲ್) ಮತ್ತು ಅದಾನಿ ಪವರ್ ಕಂಪನಿ ನಡುವಿನ ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ ಎಂದು ತಿಳಿಸಿವೆ.
ಉತ್ತರ ಪ್ರದೇಶದಲ್ಲಿ ಅದಾನಿ ಪವರ್‌ನಿಂದ ಹೊಸ ಘಟಕ ಸ್ಥಾಪಿಸಲಾಗುತ್ತಿದ್ದು, ಇದು ಪೂರ್ಣಗೊಂಡ ಬಳಿಕ ವಿದ್ಯುತ್ ಪೂರೈಕೆ ಮಾಡಲಿದೆ ಎಂದು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.