ಮುಂಬೈ/ ನವದೆಹಲಿ: ಪ್ರಜಾಪ್ರಭುತ್ವವನ್ನು ಪಣಕ್ಕಿಟ್ಟಂತೆ ಇರುವ ಈ ಪರಿಸ್ಥಿತಿಯಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಇರಬೇಕಿದೆ ಎಂದು ಶಿವಸೇನಾ (ಯುಬಿಟಿ) ಮುಖಂಡ ಆದಿತ್ಯ ಠಾಕ್ರೆ
ಪ್ರತಿಪಾದಿಸಿದರು.
ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮೈತ್ರಿಯನ್ನು ಬಿಕ್ಕಟ್ಟಿನಿಂದ ಹೊರತರುವ ಭಾಗವಾಗಿ ಆದಿತ್ಯ ಠಾಕ್ರೆ ಅವರು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ, ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.
ಮಹಾರಾಷ್ಟ್ರದಲ್ಲಿನ ಪ್ರತಿಪಕ್ಷಗಳ
ಕೂಟ ಮಹಾ ವಿಕಾಸ್ ಆಘಾಡಿ (ಎಂವಿಎ) ಭಾಗವಾಗಿರುವ ಎನ್‌ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಸನ್ಮಾನ ಮಾಡಿದ ಬೆನ್ನಲ್ಲೇ, ರಾಹುಲ್ ಮತ್ತು ಕೇಜ್ರಿವಾಲ್ ಅವರನ್ನು ಜೂನಿಯರ್ ಠಾಕ್ರೆ ಭೇಟಿ ಮಾಡಿರುವುದು ಮಹತ್ವದ ರಾಜಕೀಯ ಬೆಳವಣಿಗೆಯಾಗಿದೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆದಿತ್ಯ ಠಾಕ್ರೆ, ‘ಮಹಾರಾಷ್ಟ್ರದಲ್ಲಿ ಶಿವಸೇನಾ ಪಕ್ಷಕ್ಕೆ ಆಗಿರುವ ಗತಿಯೇ ಮುಂಬರುವ ದಿನಗಳಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೂ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
‘ಇಂದು ದೇಶದ ಭವಿಷ್ಯವು ಅನುಮಾನಕ್ಕೀಡಾಗಿದೆ. ದೇಶದಲ್ಲಿ ಮತ ವಂಚನೆ ಮತ್ತು ಇವಿಎಂ ವಂಚನೆಗಳಿಂದಾಗಿ ನಮ್ಮ ಮತಗಳು ಎಲ್ಲಿಗೆ ಹೋಗುತ್ತಿವೆ ಎಂಬುದೇ ತಿಳಿಯು ತ್ತಿಲ್ಲ. ದೇಶದಲ್ಲಿ ಇಂದು ಚುನಾವಣೆಗಳು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯುತ್ತಿಲ್ಲ’ ಎಂದು ಹೇಳಿದರು.
ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಯಾಕೆ ಭೇಟಿಯಾಗಿಲ್ಲ ಎಂಬ ಪ್ರಶ್ನೆಗೆ, ‘ಮುಂಬೈನಲ್ಲಿ ನಾವು ಆಗಾಗ ಭೇಟಿಯಾಗುತ್ತಿರುತ್ತೇವೆ. ಕೆಲವು ದಿನಗಳ ಹಿಂದಷ್ಟೇ ನಾವು ಪರಸ್ಪರ ಭೇಟಿಯಾಗಿದ್ದೆವು’ ಎಂದು ಉತ್ತರಿಸಿದರು.
ಈ ಭೇಟಿ ಸಂದರ್ಭದಲ್ಲಿ ಶಿವಸೇನಾ (ಯುಬಿಟಿ) ಮುಖಂಡರಾದ ಸಂಜಯ್ ರಾವುತ್, ಪ್ರಿಯಾಂಕಾ ಚತುರ್ವೇದಿ ಸೇರಿದಂತೆ ಇತರರು ಹಾಜರಿದ್ದರು. ಇತ್ತೀಚೆಗಷ್ಟೇ ಫಲಿತಾಂಶ ಕಂಡ ದೆಹಲಿ ವಿಧಾನಸಭೆ ಚುನಾವಣೆ ಮತ್ತು ‘ಇಂಡಿಯಾ’ ಒಕ್ಕೂಟದ ಸ್ಥಿತಿ–ಗತಿಯ ಚರ್ಚೆ ನಡೆದಿದೆ ಎಂದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.