ADVERTISEMENT

ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್‌ರಿಂದ ಕಾನೂನು ಪರಿಪಾಲನೆ: ಅಮಿತ್ ಶಾ ಶ್ಲಾಘನೆ

ಪಿಟಿಐ
Published 4 ಫೆಬ್ರುವರಿ 2022, 10:21 IST
Last Updated 4 ಫೆಬ್ರುವರಿ 2022, 10:21 IST
ಅಮಿತ್ ಶಾ
ಅಮಿತ್ ಶಾ   

ಗೋರಖ್‌ಪುರ: ಉತ್ತರ ಪ್ರದೇಶದಲ್ಲಿ 25 ವರ್ಷಗಳ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿಜವಾದ ಅರ್ಥದಲ್ಲಿ ಕಾನೂನು ಪರಿಪಾಲನೆ ಮಾಡುವ ಮೂಲಕ ರಾಜ್ಯವನ್ನು ಮಾಫಿಯಾಗಳಿಂದ ಮುಕ್ತಗೊಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಶ್ಲಾಘಿಸಿದ್ದಾರೆ.

ಕಳೆದ ಬಾರಿ ಸೋತಿರುವ ವಿರೋಧ ಪಕ್ಷಗಳ ಮೈತ್ರಿಕೂಟವು ಈ ಬಾರಿಯು ಸೋಲು ಅನುಭವಿಸಲಿದೆ ಎಂದವರು ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೋರಖ್‌ಪುರ ನಗರ ಕ್ಷೇತ್ರದಿಂದ ಆದಿತ್ಯನಾಥ್ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ನಡೆದ ಚುನಾವಣಾ ಸಭೆಯನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದರು.

ಉತ್ತರ ಪ್ರದೇಶದ ಅಭಿವೃದ್ಧಿಗೆ ವಿಶೇಷವಾಗಿ ಪೂರ್ವಾಂಚಲ ಪ್ರದೇಶದತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ ಎಂದು ಅಮಿತ್ ಶಾ ಅಭಿನಂದಿಸಿದರು.

ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಂದು ಮತದಾನ ಆರಂಭವಾಗಲಿದ್ದು, ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.