ADVERTISEMENT

ತೆಲಂಗಾಣ | ಕಲಬೆರಕೆ ಸೇಂದಿ ಸೇವಿಸಿ 13 ಮಂದಿ ತೀವ್ರ ಅಸ್ವಸ್ಥ

ಪಿಟಿಐ
Published 9 ಜುಲೈ 2025, 10:17 IST
Last Updated 9 ಜುಲೈ 2025, 10:17 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹೈದರಾಬಾದ್: ಕಲಬೆರಕೆ ಸೇಂದಿ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿರುವ ಹದಿಮೂರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕುಕಟ್ ಪಲ್ಲಿ ಪ್ರದೇಶದ ಜನರಲ್ಲಿ ತೀವ್ರ ಕರುಳು ಉರಿಯೂತ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಸದ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (NIMS) ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

‘ಅಸ್ವಸ್ಥರು ಕಲಬೆರಕೆ ಸೇಂದಿ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ’ ಎಂದು ತೆಲಂಗಾಣ ಆರೋಗ್ಯ ಸಚಿವ ದಾಮೋದರ್ ರಾಜನರಸಿಂಹ ತಿಳಿಸಿದ್ದಾರೆ.

ಅಸ್ವಸ್ಥಗೊಂಡವರ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯರು ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಹಾರದ ಸಿವಾನ್‌ ಮತ್ತು ಸಾರಣ್‌ ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವಿಸಿ 35ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.