ನವದೆಹಲಿ: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021 ವೈಮಾನಿಕ ಪ್ರದರ್ಶನಕ್ಕೆ ಶುಭ ಕೋರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಹಾಗೂ ವೈಮಾನಿಕ ಕ್ಷೇತ್ರದಲ್ಲಿ ಭಾರತ ಅಗಾಧ ಸಾಮರ್ಥ್ಯವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಬುಧವಾರ ಆರಂಭಗೊಂಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಹಾಗೂ ವೈಮಾನಿಕ ಕ್ಷೇತ್ರದಲ್ಲಿ ಭಾರತ ಅಗಾಧ ಸಾಮರ್ಥ್ಯವನ್ನು ಹೊಂದಿದೆ. ಏರೋ ಇಂಡಿಯಾ ಈ ಕ್ಷೇತ್ರದಲ್ಲಿ ಸಹಯೋಗಕ್ಕಾಗಿ ಅದ್ಭುತ ವೇದಿಕೆಯಾಗಿದೆ ಎಂದರು.
ವೈಮಾನಿಕ ಕ್ಷೇತ್ರದಲ್ಲಿ ಭಾರತೀಯ ಸರ್ಕಾರವು ಭವಿಷ್ಯದ ಸುಧಾರಣೆಗಳನ್ನು ತಂದಿದೆ. ಇದು ಸ್ವಾವಲಂಬಿ ದೇಶವಾಗಬೇಕೆಂಬ ನಮ್ಮ ಗುರಿಗೆ ಮತ್ತಷ್ಟು ಪ್ರಚೋದನೆಯನ್ನು ತುಂಬುತ್ತದೆ ಎಂದು ಹೇಳಿದರು.
ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನವಾದ ಏರೋ ಇಂಡಿಯಾ 2021 ಆವೃತ್ತಿಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.