ADVERTISEMENT

ಎಇಎಸ್ ಸೋಂಕು: ಮೃತಪಟ್ಟ ಮಕ್ಕಳ ಸಂಖ್ಯೆ 100ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 9:34 IST
Last Updated 17 ಜೂನ್ 2019, 9:34 IST
   

ಮುಜಾಫರ್‌‌ಪುರ್ (ಬಿಹಾರ):ಅಕ್ಯೂಟ್ ಎನ್ಸೆಫಾಲಿಟೆಸ್ ಸಿಂಡ್ರೊಮ್ (ಎಇಎಸ್) ಬಾಧಿಸಿ ಬಿಹಾರದ ಮುಜಾಫರ್‌‌ಪುರದಲ್ಲಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಮಕ್ಕಳ ಸಂಖ್ಯೆ 100ಕ್ಕೆ ಏರಿದೆ.

ಈ ಸಂಬಂಧ ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶ ನೀಡಿ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಹಾಗೂ ವೈದ್ಯರು ತ್ವರಿತವಾಗಿ ಈ ಸಾವು ನೋವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ. ಅಲ್ಲದೆ, ಸರ್ಕಾರದಿಂದ ಯಾವ ಸಹಾಯಬೇಕು ಅದನ್ನು ಕೇಳುವಂತೆಯೂ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಎಇಎಸ್ ಸೋಂಕು ತಗುಲಿದ ಮಕ್ಕಳಲ್ಲಿ ಮೊದಲು ಅತಿಯಾದ ಜ್ವರ, ಸ್ನಾಯು ಸೆಳೆತ ಹಾಗೂ ತಲೆ ನೋವು ಕಾಣಿಸಿಕೊಳ್ಳುತ್ತದೆ. ಊಟ ಮಾಡದೆ ರಾತ್ರಿ ಮಲಗುವುದು, ದೇಹದಲ್ಲಿ ನೀರಿನಂಶ ಕಡಿಮೆಯಾದಾಗ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಆರಂಭದಲ್ಲಿಲಿಚ್ಚಿ ಎಂಬ ಹಣ್ಣು ತಿನ್ನುವುದರಿಂದ ಮಕ್ಕಳಲ್ಲಿ ಈ ಸೋಂಕು ಬಂದಿದೆ ಎಂದು ಹೇಳಲಾಗಿತ್ತು. ಆದರೆ, ವೈದ್ಯಾಧಿಕಾರಿಗಳ ತಪಾಸಣೆಯಿಂದ ಈ ಸೋಂಕು ಹಣ್ಣಿನಿಂದ ಬಂದಿಲ್ಲ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ ಮುಜಾಫರ್‌‌ಪುರ ಶ್ರೀಕೃಷ್ಣ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 83 ಮಕ್ಕಳು ಹಾಗೂ ಕೇಜ್ರಿವಾಲ್ ಆಸ್ಪತ್ರೆಯಲ್ಲಿ 17 ಮಕ್ಕಳು ಈವರೆಗೆ ಸಾವಿಗೀಡಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಸುನಿಲ್ ಕುಮಾರ್ ಸಾಹಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.