ನವದೆಹಲಿ: ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ 600ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಅಫ್ಗಾನಿಸ್ತಾನದ ಪೂರ್ವಭಾಗದಲ್ಲಿ ಸಂಭವಿಸಿದ 6.0ರಷ್ಟು ತೀವ್ರತೆಯ ಭೂಕಂಪದಲ್ಲಿ 610 ಜನ ಮೃತಪಟ್ಟಿದ್ದು, 1,300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ‘ಭೂಕಂಪದಿಂದ ನೂರಾರು ಜನ ಜೀವ ಕಳೆದುಕೊಂಡಿರುವ ಸುದ್ದಿ ದುಃಖ ತಂದಿದೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ, ಮೃತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಸಂಕಷ್ಟದ ಸಮಯದಲ್ಲಿ ಎಲ್ಲಾ ರೀತಿಯ ನೆರವು ನೀಡಲು ಮತ್ತು ಬಾಧಿತರಿಗೆ ಪರಿಹಾರ ನೀಡಲು ಭಾರತ ಬದ್ಧವಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.