ಅಮೀರ್ ಖಾನ್ ಮುತ್ತಕಿ
ಚಿತ್ರಕೃಪೆ: ರಾಯಿಟರ್ಸ್
ನವದೆಹಲಿ: ವಿದೇಶ ಪ್ರವಾಸಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಿಂದ ಅನುಮತಿ ಸಿಗದ ಹಿನ್ನೆಲೆ ಅಫ್ಗಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.
ಮುತ್ತಕಿ ಅವರ ಭಾರತ ಭೇಟಿಯನ್ನು ಈ ತಿಂಗಳು ನಿಗದಿಪಡಿಸಲಾಗಿತ್ತು. ಯೋಜನೆಯಂತೆ ಮುತ್ತಕಿ ಅವರು ಭಾರತಕ್ಕೆ ಭೇಟಿ ನೀಡಿದ್ದರೆ, ಅಫ್ಗಾನಿಸ್ಥಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗುತ್ತಿತ್ತು.
ತಾಲಿಬಾನ್‌ನ ಎಲ್ಲಾ ಪ್ರಮುಖ ನಾಯಕರ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿ ಹಲವು ನಿರ್ಬಂಧಗಳನ್ನು ಹೇರಿದೆ. ಇದರನ್ವಯ ವಿದೇಶ ಪ್ರಯಾಣಕ್ಕೆ ವಿನಾಯಿತಿ ಪಡೆಯುವುದು ಕಡ್ಡಾಯವಾಗಿದೆ.
ಮೇ 15 ರಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುತ್ತಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಈ ವೇಳೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಮುತ್ತಕಿ ಬಲವಾಗಿ ಖಂಡಿಸಿದ್ದರು.
ಭಾರತವು ತಾಲಿಬಾನ್ ರಚನೆಯನ್ನು ಇನ್ನೂ ಗುರುತಿಸಿಲ್ಲ. ಆದರೆ ಯಾವುದೇ ದೇಶದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ ಅಫ್ಗಾನಿಸ್ಥಾನದ ನೆಲವನ್ನು ಬಳಸಬಾರದು ಎಂದು ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.