

ಸಾವು
(ಪ್ರಾತಿನಿಧಿಕ ಚಿತ್ರ)
ಕಾಬುಲ್: ಅಫ್ಘಾನಿಸ್ತಾನದ ಹಲವು ಪ್ರದೇಶಗಳಲ್ಲಿ ಹಠಾತ್ತನೆ ಉಂಟಾದ ಭಾರಿ ಮಳೆ, ಪ್ರವಾಹ, ಹಿಮಪಾತದಿಂದ ಕನಿಷ್ಠ 17 ಜನರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.
ಭಾರಿ ಮಳೆಯಿಂದ ದೇಶದ ಮಧ್ಯ, ಉತ್ತರ, ದಕ್ಷಿಣ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ದೈನಂದಿನ ಜೀವನಕ್ಕೆ ಧಕ್ಕೆಯಾಗಿದೆ ಎಂದು ಅಲ್ಲಿನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಯೂಸಫ್ ಹಮ್ಮದ್ ಗುರುವಾರ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಮೂಲ ಸೌಕರ್ಯ ಹಾನಿಗೊಂಡಿವೆ. 1,800 ಕುಟುಂಬಗಳ ಮೇಲೆ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.