ADVERTISEMENT

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ|ಅಫ್ಗನ್ ಸರ್ಕಾರದ ನಿರ್ಧಾರ:ಕೇಂದ್ರ

ಪಿಟಿಐ
Published 12 ಅಕ್ಟೋಬರ್ 2025, 4:41 IST
Last Updated 12 ಅಕ್ಟೋಬರ್ 2025, 4:41 IST
   

ನವದೆಹಲಿ: ‘ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಾಕಿ ಅವರ ಸುದ್ದಿಗೋಷ್ಠಿಗೆ ಪತ್ರಕರ್ತೆಯರಿಗೆ ಆಹ್ವಾನ ನೀಡದಿರುವುದು ಅಫ್ಗಾನಿಸ್ತಾನ ಸರ್ಕಾರದ ನಿರ್ಧಾರ. ಆ ರಾಷ್ಟ್ರದ ರಾಯಭಾರ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿ ನಡೆದಿದ್ದು, ಇದು ಭಾರತದ ನಿಯಂತ್ರಣಕ್ಕೆ ಒಳಪಡುವುದಿಲ್ಲ’ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ.

ಸಚಿವ ಮುತ್ತಾಕಿ ಅವರ ಸುದ್ದಿಗೋಷ್ಠಿಗೆ ಪತ್ರಕರ್ತೆಯರಿಗೆ ಅವಕಾಶ ನೀಡದ ವಿಚಾರವಾಗಿ ಟೀಕಿಸುತ್ತಿರುವ ವಿರೋಧ ಪಕ್ಷಗಳಿಗೆ ಕೇಂದ್ರ ಸರ್ಕಾರ ತಿರುಗೇಟು ನೀಡಿದೆ.

‘ಮುಂಬೈನಲ್ಲಿರುವ ಅಫ್ಗಾನಿಸ್ತಾನದ ಕಾನ್ಸುಲೇಟ್‌ ಜನರಲ್‌ ಅಧಿಕಾರಿಗಳು ಸುದ್ದಿಗೋಷ್ಠಿಗೆ ಆಹ್ವಾನ ನೀಡಿದ್ದು, ಇದರಲ್ಲಿ ಸರ್ಕಾರದ ಪಾತ್ರ ಇಲ್ಲ’ ಎಂದು ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.