ADVERTISEMENT

ಆಫ್ರಿಕನ್‌ ಹಂದಿ ಜ್ವರ: ಕೇರಳದಲ್ಲಿ ಹಂದಿ ಕೊಲ್ಲುವ ಪ್ರಕ್ರಿಯೆ ಆರಂಭ

ಪಿಟಿಐ
Published 24 ಜುಲೈ 2022, 14:03 IST
Last Updated 24 ಜುಲೈ 2022, 14:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಯನಾಡ್‌: ಆಫ್ರಿಕನ್‌ ಹಂದಿ ಜ್ವರ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಹಂದಿಗಳನ್ನು ಕೊಲ್ಲುವ ಕಾರ್ಯವು ಇಲ್ಲಿ ಭಾನುವಾರ ಆರಂಭಗೊಂಡಿದೆ.

ರೋಗ ವರದಿಯಾಗಿರುವ ಮಾನಂತವಾಡಿ ಪ್ರದೇಶದ ರೈತರಿಗೆ, ಭೋಪಾಲ್‌ನ ಎನ್‌ಐಎಚ್‌ಎಸ್‌ಎಡಿ ಪ್ರಯೋಗಾಲಯ ಕಳುಹಿಸಿರುವ ವರದಿಯನ್ನು ತೋರಿಸಿ ಹಂದಿಗಳನ್ನು ಕೊಲ್ಲುವ ಪ್ರಕ್ರಿಯೆಗೆ ಸಹಕರಿಸುವಂತೆ ಮನವರಿಕೆ ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ರೋಗ ಕಂಡು ಬಂದಿರುವ ಹಂದಿ ಸಾಕಾಣಿಕೆ ಕೇಂದ್ರದಲ್ಲಿ 360 ಹಂದಿಗಳಿದ್ದು, ಅಲ್ಲಿ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಿಕೊಳ್ಳಲಾಗಿದೆ. ಈ ಪ್ರದೇಶದ ರೈತರು ಹಂದಿಗಳನ್ನು ಕೊಲ್ಲುವ ಪ್ರಕ್ರಿಯೆಗೆ ಸಮ್ಮಿತಿ ಸೂಚಿಸಿದ್ದಾರೆ ಎಂದೂ ಹೇಳಿದ್ದಾರೆ.

ADVERTISEMENT

ಮಾನಂತವಾಡಿಯ ಎರಡು ಹಂದಿ ಸಾಕಾಣಿಕೆ ಕೇಂದ್ರಗಳಲ್ಲಿ ಈಚೆಗೆ ಆಫ್ರಿಕನ್‌ ಹಂದಿ ಜ್ವರ ಪ್ರಕರಣಗಳು ಪತ್ತೆಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.