ADVERTISEMENT

ಅಸ್ಸಾಂನಲ್ಲಿ ಶೀಘ್ರದಲ್ಲೇ ಅಫ್‌ಸ್ಪಾ ಸಂಪೂರ್ಣ ತೆರವು: ಅಮಿತ್‌ ಶಾ

ಪಿಟಿಐ
Published 10 ಮೇ 2022, 10:03 IST
Last Updated 10 ಮೇ 2022, 10:03 IST
ಗೃಹ ಸಚಿವ ಅಮಿತ್‌ ಶಾ | ಪಿಟಿಐ ಚಿತ್ರ
ಗೃಹ ಸಚಿವ ಅಮಿತ್‌ ಶಾ | ಪಿಟಿಐ ಚಿತ್ರ   

ಗುವಾಹಟಿ: ಅಸ್ಸಾಂನಲ್ಲಿ ಶೀಘ್ರದಲ್ಲೇ ಸಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು (ಎಎಫ್‌ಎಸ್‌ಪಿಎ) ಸಂಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸಿರುವುದರಿಂದ ವಿವಿಧ ಭಾಗಗಳಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದರು.

'ಕೇಂದ್ರ ಸರ್ಕಾರ ಮತ್ತು ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಪ್ರಯತ್ನದಿಂದ ರಾಜ್ಯದಲ್ಲಿ ಶಾಂತಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಸಂಪೂರ್ಣ ರಾಜ್ಯವು ಬಂಡಾಯ ಮತ್ತು ಹಿಂಸಾಕೃತ್ಯಗಳಿಂದ ಮುಕ್ತವಾಗುವ ದಿನ ದೂರವಿಲ್ಲ' ಎಂದು ಅಮಿತ್‌ ಶಾ ಹೇಳಿದರು.

ADVERTISEMENT

'ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು 23 ಜಿಲ್ಲೆಗಳಲ್ಲಿ ತೆಗೆದುಹಾಕಲಾಗಿದೆ ಮತ್ತು 1 ಜಿಲ್ಲೆಯಲ್ಲಿ ಭಾಗಶಃ ತೆರವು ತೆಗೆಯಲಾಗಿದೆ. ಶೀಘ್ರದಲ್ಲೇ ರಾಜ್ಯದಾದ್ಯಂತ ಸಂಪೂರ್ಣವಾಗಿ ಆಫ್‌ಸ್ಪಾವನ್ನು ತೆರವುಗೊಳಿಸುವ ವಿಶ್ವಾಸವಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.