ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನವಾಬ್‌ ಮಲಿಕ್‌ ಆಸ್ಪತ್ರೆಯಿಂದ ಮನೆಗೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2023, 23:30 IST
Last Updated 14 ಆಗಸ್ಟ್ 2023, 23:30 IST
ನವಾಬ್‌ ಮಲಿಕ್‌
ನವಾಬ್‌ ಮಲಿಕ್‌   

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ, ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ ಅವರಿಗೆ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದ, ಮೂರು ದಿನಗಳ ಬಳಿಕ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದರು.

ಮಲಿಕ್‌ ಅವರು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರ ನಿಕಟವರ್ತಿ. ಮುಂಬೈನ ಶಾಸಕರೂ ಆಗಿರುವ 64 ವರ್ಷದ ಮಲಿಕ್‌ ಆಸ್ಪತ್ರೆಯಿಂದ ಹೊರಗೆ ಬರುತ್ತಿದ್ದಂತೆ ಅವರಿಗೆ ಭವ್ಯ ಸ್ವಾಗತ ದೊರೆಯಿತು.

ಪಾಕಿಸ್ತಾನ ಮೂಲದ ಭೂಗತ ಪಾತಕಿ ಮತ್ತು 1993ರ ಮುಂಬೈ ಸರಣಿ ಸ್ಫೋಟದ ಪ್ರಮುಖ ಸಂಚುಕೋರ ದಾವೂದ್‌ ಇಬ್ರಾಹಿಂನ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಪಿಎಂಎಲ್‌ಎ ಕಾಯ್ದೆಯಡಿ 2022ರ ಫೆಬ್ರುವರಿ 23ರಂದು ಮಲಿಕ್‌ ಅವರನ್ನು ಬಂಧಿಸಿತ್ತು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.