ADVERTISEMENT

ವಿಮಾನ ಟಿಕೆಟ್‌ ಬುಕ್ಕಿಂಗ್‌ ಸ್ಥಗಿತ: ಏರ್‌ ಇಂಡಿಯಾ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2020, 21:48 IST
Last Updated 19 ಏಪ್ರಿಲ್ 2020, 21:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ:ಎಲ್ಲಾ ವಿಮಾನಗಳ ಟಿಕೆಟ್‌ ಬುಕ್ಕಿಂಗ್‌ ಸ್ಥಗಿತಗೊಳಿಸಿರುವುದಾಗಿಏರ್ ಇಂಡಿಯಾ ತಿಳಿಸಿದೆ.

ಪ್ರಯಾಣಿಕ ವಿಮಾನ ಸೇವೆ ಪುನರಾರಂಭಿಸುವ ಕುರಿತುಸರ್ಕಾರ ನಿರ್ಧಾರ ತೆಗೆದುಕೊಂಡ ಬಳಿಕವಷ್ಟೇ ಬುಕ್ಕಿಂಗ್ ಆರಂಭಿಸುವಂತೆ ನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ ಅವರುಸಲಹೆ ನೀಡಿದ ಬೆನ್ನಲ್ಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ.

‘ಪ್ರಯಾಣಿಕರು ಕಾಯ್ದಿರಿಸಿದ ಟಿಕೆಟ್‌ಗಳನ್ನು ರದ್ದು ಮಾಡಲಾಗಿದೆ. ಭವಿಷ್ಯದಲ್ಲಿ ಕೈಗೊಳ್ಳುವ ಪ್ರಯಾಣಕ್ಕೆಈ ಹಣ ಬಳಸಿಕೊಳ್ಳಲು ಅವಕಾಶ ನೀಡಲಾಗುವುದು’ ಎಂದು ಏರ್‌ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಏರ್ ಇಂಡಿಯಾವು ಮೇ 4ರಿಂದ ಆಯ್ದ ಮಾರ್ಗಗಳಲ್ಲಿ ದೇಶಿಯ ವಿಮಾನಯಾನ ಹಾಗೂ ಜೂನ್ 1ರಿಂದ ಅಂತರರಾಷ್ಟ್ರೀಯ ವಿಮಾನಯಾನಕ್ಕೆ ಬುಕ್ಕಿಂಗ್ ಆರಂಭಿಸುವುದಾಗಿ ಶನಿವಾರ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.