ADVERTISEMENT

ಅಬ್ದುಲ್ಲಕುಟ್ಟಿ ಬಿಜೆಪಿಗೆ?

ಏಜೆನ್ಸೀಸ್
Published 24 ಜೂನ್ 2019, 20:00 IST
Last Updated 24 ಜೂನ್ 2019, 20:00 IST
   

ತಿರುವನಂತಪುರ: ನರೇಂದ್ರ ಮೋದಿ ಅವರನ್ನು ಹೊಗಳಿದ ಕಾರಣಕ್ಕೆ ಪ‍ಕ್ಷದಿಂದ ಉಚ್ಚಾಟನೆಗೊಂಡಿರುವ ಕೇರಳದ ಕಾಂಗ್ರೆಸ್‌ ನಾಯಕ ಎ.ಪಿ. ಅಬ್ದುಲ್ಲಕುಟ್ಟಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರನ್ನು ಸೋಮವಾರ ಭೇಟಿಮಾಡಿ ಮಾತುಕತೆ ನಡೆಸಿದರು.

ಭೇಟಿಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಪ್ರಧಾನಿ ಮತ್ತು ಶಾ ಅವರು ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ’ ಎಂದರು.

ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಹೊಗಳಿದ ಕಾರಣಕ್ಕೆ ಅಬ್ದುಲ್ಲಕುಟ್ಟಿ ಅವರನ್ನು 2009ರಲ್ಲಿ ಸಿಪಿಎಂನಿಂದ ಉಚ್ಚಾಟಿಸಲಾಗಿತ್ತು. ಆನಂತರ ಅವರು ಕಾಂಗ್ರೆಸ್‌ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು ಪುನಃ ಮೋದಿ ಯನ್ನು ಹೊಗಳಿದ ಕಾರಣಕ್ಕೆ ಕಾಂಗ್ರೆಸ್‌ನಿಂದಲೂ ಉಚ್ಚಾಟನೆಗೊಂಡರು.

ADVERTISEMENT

ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಸದ್ಯದಲ್ಲೇ ಉಪ ಚುನಾವಣೆ ನಡೆಯಲಿದ್ದು, ಅಬ್ದುಲ್ಲಕುಟ್ಟಿ ಅವರನ್ನು ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.