ADVERTISEMENT

‘ಗಗನಯಾನ’: ರಷ್ಯಾ ಜತೆ ಒಪ್ಪಂದ ಸಾಧ್ಯತೆ

ಪಿಟಿಐ
Published 23 ಸೆಪ್ಟೆಂಬರ್ 2018, 20:15 IST
Last Updated 23 ಸೆಪ್ಟೆಂಬರ್ 2018, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ : ಬಾಹ್ಯಾಕಾಶಕ್ಕೆ ಮನುಷ್ಯನನ್ನು ಕಳುಹಿಸುವ ಇಸ್ರೊದ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಗೆ ರಷ್ಯಾದ ಪರಿಣತಿಯ ಲಾಭ ದೊರೆಯುವ ಸಾಧ್ಯತೆ ಇದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ಅವರು ದೆಹಲಿಗೆ ಮುಂದಿನ ತಿಂಗಳು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬಾಹ್ಯಾಕಾಶ ಕಾರ್ಯಕ್ರಮಗಳ ಅನುಭವ ಹಂಚಿಕೆ ಸಂಬಂಧ ಒಪ್ಪಂದ ಏರ್ಪಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, ರಷ್ಯಾದ ಪಥದರ್ಶಕ ಮತ್ತು ಜಾಡುಪತ್ತೆ ವ್ಯವಸ್ಥೆ (ಜಿಪಿಎಸ್‌) ಗ್ಲೋನಸ್‌ ಮತ್ತು ಭಾರತದ ಜಿಪಿಎಸ್‌ ವ್ಯವಸ್ಥೆ ನಾವಿಕ್‌ನ ಭೂಕೇಂದ್ರ ಸ್ಥಾಪನೆಯ ಬಗ್ಗೆಯೂ ಚರ್ಚೆ ನಡೆಯಲಿದೆ.

ಬಾಹ್ಯಾಕಾಶಕ್ಕೆ ಮನುಷ್ಯರನ್ನು ಕಳುಹಿಸುವ ವಿಚಾರದಲ್ಲಿ ಫ್ರಾನ್ಸ್‌ನ ಅನುಭವವನ್ನು ಹಂಚಿಕೊಳ್ಳುವ ಬಗ್ಗೆ ಆ ದೇಶದ ಜತೆಗೆ ಇತ್ತೀಚೆಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ADVERTISEMENT

2022ರ ಹೊತ್ತಿಗೆ ಮೂವರು ಭಾರತೀಯರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಯೋಜನೆಯನ್ನು ಇಸ್ರೊ ಹಾಕಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.