ADVERTISEMENT

ಅ.7ಕ್ಕೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ: ಎಐಎಡಿಎಂಕೆ

ಪಿಟಿಐ
Published 29 ಸೆಪ್ಟೆಂಬರ್ 2020, 8:05 IST
Last Updated 29 ಸೆಪ್ಟೆಂಬರ್ 2020, 8:05 IST
ಕಾರ್ಯಕಾರಿ ಸಮಿತಿ ಸಭೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ –ಪಿಟಿಐ ಚಿತ್ರ  
ಕಾರ್ಯಕಾರಿ ಸಮಿತಿ ಸಭೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ –ಪಿಟಿಐ ಚಿತ್ರ     

ಚೆನ್ನೈ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅ.7ರಂದು ಘೋಷಿಸಲಾಗುವುದು ಎಂದು ಎಐಎಡಿಎಂಕೆ ಸೋಮವಾರ ತಿಳಿಸಿದೆ.

ಐದು ಗಂಟೆಗಳ ಕಾಲ ನಡೆದ ಎಐಎಡಿಎಂಕೆ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಮಾತನಾಡಿದ ಪಕ್ಷದ ಉಪ ಸಂಯೋಜಕ ಕೆ.ಪಿ.ಮುನುಸಾಮಿ, ಎಐಎಡಿಎಂಕೆ ನಾಯಕರಾದ ಒ.ಪನ್ನೀರ್‌ಸೆಲ್ವಂ ಹಾಗೂ ಕೆ.ಪಳನಿಸ್ವಾಮಿ ಅವರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ ಎಂದರು.

‘ಒ.ಪನ್ನೀರ್‌ಸೆಲ್ವಂ ಹಾಗೂ ಕೆ.ಪಳನಿಸ್ವಾಮಿ ಇಬ್ಬರಲ್ಲಿ ಯಾರು ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕು ಎನ್ನುವ ವಿಷಯ ಸಭೆಯಲ್ಲಿ ಸುಧೀರ್ಘವಾಗಿ ಚರ್ಚೆಯಾಗಿದೆ. ಕೊನೆಯಲ್ಲಿ ಮುಂದಿನ ತಿಂಗಳು ಅಧಿಕೃತವಾಗಿ ಈ ಕುರಿತು ಘೋಷಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ADVERTISEMENT

ಮೂರನೇ ಬಾರಿಗೆ ಅಧಿಕಾರಕ್ಕೇರಲು ಎಲ್ಲರೂ ಜೊತೆಯಾಗಿ ಸಹೋದರರ ರೀತಿಯಲ್ಲಿ ಕಠಿಣ ಪರಿಶ್ರಮದೊಂದಿಗೆ ಕೆಲಸ ಮಾಡಬೇಕು ಎನ್ನುವ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.