ADVERTISEMENT

ಮೇಕೆದಾಟು ಯೋಜನೆಗೆ ಪುದುಚೇರಿ ವಿರೋಧ

ಪಿಟಿಐ
Published 14 ಜುಲೈ 2021, 16:12 IST
Last Updated 14 ಜುಲೈ 2021, 16:12 IST
ಮೇಕೆದಾಟು ಯೋಜನೆ
ಮೇಕೆದಾಟು ಯೋಜನೆ   

ಪುದಚೇರಿ: ಮೇಕೆದಾಟುವಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟು ಯೋಜನೆಗೆತಮಿಳುನಾಡಿನ ನಂತರ ಪುದುಚೇರಿಯ ಎಐಎನ್‌ಆರ್‌ಸಿ ನೇತೃತ್ವದ ಎನ್‌ಡಿಎ ಸರ್ಕಾರವು ವಿರೋಧ ವ್ಯಕ್ತಪಡಿಸಲು ನಿರ್ಧರಿಸಿದೆ ಎಂದು ಬುಧವಾರ ಅಧಿಕೃತ ಮೂಲಗಳು ತಿಳಿಸಿವೆ.

ಈ ವಿಷಯದಲ್ಲಿ ಕೇಂದ್ರದ ಹಸ್ತಕ್ಷೇಪವನ್ನು ಕೋರಿ ಪುದುಚೇರಿಯ ಮುಖ್ಯಮಂತ್ರಿ ಎನ್. ರಂಗಸಾಮಿ ಅವರು ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆಯಲಿದ್ದಾರೆ. ಅಂದಾಜು ₹ 9 ಸಾವಿರ ಕೋಟಿ ವೆಚ್ಚದ ಜಲಾಶಯವನ್ನು ನಿರ್ಮಿಸಲು ಕರ್ನಾಟಕಕ್ಕೆ ಅನುಮತಿ ನೀಡದಂತೆ ಅವರು ಪತ್ರದಲ್ಲಿ ಕೋರಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ಈ ಕುರಿತು ಬುಧವಾರ ರಂಗಸಾಮಿ ಅವರು ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದು, ಕೇಂದ್ರಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದಾರೆ.

ADVERTISEMENT

‘ಒಂದು ವೇಳೆ ಕರ್ನಾಟಕವು ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಿದರೆ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯಲಿದೆ. ಆದರೆ, ಕೃಷಿ ಚಟುವಟಿಕೆಗಳಿಗಾಗಿ ಕಾವೇರಿ ನದಿ ನೀರಿನ ಮೇಲೆ ಅವಲಂಬಿತವಾಗಿರುವ ಪುದುಚೇರಿಯ ಕಾರೈಕಲ್ ಪ್ರದೇಶದ ಮೇಲೆ ಹೊಡೆತ ಬೀಳಲಿದೆ’ ಎಂಬ ಅಭಿಪ್ರಾಯವು ಸಭೆಯಲ್ಲಿ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.