ADVERTISEMENT

ಅಗ್ನಿಪಥ: ಹಿಂಸಾತ್ಮಕ ಪ್ರತಿಭಟನೆಗಳು ಬೇಡ ಎಂದ ಕಾಂಗ್ರೆಸ್ ನಾಯಕ ಕನ್ಹಯ್ ಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜೂನ್ 2022, 3:30 IST
Last Updated 19 ಜೂನ್ 2022, 3:30 IST
ಕನ್ಹಯ್ ಕುಮಾರ್
ಕನ್ಹಯ್ ಕುಮಾರ್   

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ ಒಂದು ಬಹುದೊಡ್ಡ ಹಗರಣ ಎಂದು ಕಾಂಗ್ರೆಸ್ ನಾಯಕ ಕನ್ಹಯ್ ಕುಮಾರ್ ಹೇಳಿದ್ದಾರೆ.

‘ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅಷ್ಟಕ್ಕೂ ಅಗ್ನಿಪಥ ಯೋಜನೆ ಅವಶ್ಯಕತೆ ಏನಿದೆ? ನಾನು ಇದನ್ನು ಬಲವಾಗಿ ವಿರೋಧಿಸುತ್ತೇನೆ. ಆದರೆ, ಯಾರೂ ಕೂಡ ಹಿಂಸಾತ್ಮಕ ಪ್ರತಿಭಟನೆಗಳನ್ನು ಮಾಡಬಾರದು’ ಎಂದು ಅವರು ಮನವಿ ಮಾಡಿದ್ದಾರೆ.

ಈ ಹೊಸ ಅವೈಜ್ಞಾನಿಕ ಯೋಜನೆಯ ಮೂಲಕ ಕೇಂದ್ರ ಸರ್ಕಾರ ಸೇನೆಯ ಬಲಿಷ್ಠತೆಯನ್ನು ಸಡಿಲಗೊಳಿಸುತ್ತಿದೆ. ಅಲ್ಲದೇ ಅಗ್ನಿವೀರರ ಹೆಸರಿನಲ್ಲಿ ತಮ್ಮ ರಹಸ್ಯ ಕಾರ್ಯಸೂಚಿಯನ್ನು ಸಾಧಿಸಿ, ಬಹುದೊಡ್ಡ ಹಗರಣ ನಡೆಸಲು ತೀರ್ಮಾನಿಸಿದೆ ಎಂದು ಅವರು ಆರೋಪಿಸಿದ್ದಾರೆ.

ADVERTISEMENT

ಇನ್ನೊಂದೆಡೆ ಬಿಹಾರದಲ್ಲಿ ಅಗ್ನಿಪಥ ವಿರೋಧಿಸಿ ಭಾರೀ ಪ್ರತಿಭಟನೆ ನಡೆಸಿದ್ದ ಸುಮಾರು 200 ಕ್ಕೂ ಹೆಚ್ಚು ಜನರಲ್ಲಿ ಪೊಲೀಸರು ಬಂಧಿಸಿದ್ದಾರೆ. ಅದಾಗ್ಯೂ ಇಂದು ಕೂಡ ದೇಶದ ಅನೇಕ ರಾಜ್ಯಗಳಲ್ಲಿ ಯೋಜನೆ ವಿರುದ್ಧ ಪ್ರತಿಭಟನೆಗಳು ಮುಂದುವರೆದಿವೆ.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರಿಗೆ ಸೇನೆಗೆ ಸೇರಲು ಅವಕಾಶ ಇರುವುದಿಲ್ಲ ಎಂದು ವಾಯುಪಡೆ ಮುಖ್ಯಸ್ಥ ಚೌಧರಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.