ADVERTISEMENT

ಟ್ರಕ್‌ಗೆ ಬಸ್‌ ಡಿಕ್ಕಿ 14 ಮಂದಿ ಸಾವು

ಆಗ್ರಾ–ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ದುರಂತ

ಪಿಟಿಐ
Published 13 ಫೆಬ್ರುವರಿ 2020, 19:20 IST
Last Updated 13 ಫೆಬ್ರುವರಿ 2020, 19:20 IST
ಅಪಘಾತಕ್ಕೀಡಾದ ಬಸ್ಸಿನ ಪರಿಶೀಲನೆ ನಡೆಸುತ್ತಿರುವ ಪೊಲೀಸ್‌
ಅಪಘಾತಕ್ಕೀಡಾದ ಬಸ್ಸಿನ ಪರಿಶೀಲನೆ ನಡೆಸುತ್ತಿರುವ ಪೊಲೀಸ್‌   

ಫಿರೋಜಾಬಾದ್‌ (ಉತ್ತರಪ್ರದೇಶ): ಆಗ್ರಾ–ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದು, 14 ಪ್ರಯಾಣಿಕರು ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ‘ನಗ್ಲಾ ಖಂಗಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಬಸ್‌ ದೆಹಲಿಯಿಂದ ಬಿಹಾರದ ಮೋತಿಹಾರಿಗೆ ಹೋಗುತ್ತಿತ್ತು. ಬಸ್‌ನಲ್ಲಿ ಸುಮಾರು 50 ಪ್ರಯಾಣಿಕರಿದ್ದರು’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ರಾಜೇಶ್‌ ಕುಮಾರ್‌ ತಿಳಿಸಿದ್ದಾರೆ.

ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ‘ಗಾಯಗೊಂಡವರು ಶೀಘ್ರ ಗುಣಮುಖರಾಗಲಿ’ ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.