ಆಗ್ರಾ/ಮೀರತ್: ಉತ್ತರ ಪ್ರದೇಶದ ಆಗ್ರಾ, ಮೀರತ್‌ನ ಖಾಸಗಿ ಶಾಲೆಗಳಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಶಾಲೆಗಳಲ್ಲಿ ಬಾಂಬ್ ನಿಷ್ಕ್ರೀಯ ದಳದ ಸಹಾಯದೊಂದಿಗೆ ತಪಾಸಣೆ ನಡೆಸಲಾಗಿದೆ. ಆದರೆ, ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಆಗ್ರಾದ ಶ್ರೀರಾಮ್ ಶಾಲೆ ಹಾಗೂ ಗ್ಲೋಬಲ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಎರಡೂ ಶಾಲೆಗಳಲ್ಲಿ ತಪಾಸಣೆ ನಡೆಸಿದ್ದೇವೆ, ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಎಸಿಪಿ ವಿನಾಯಕ ಬೋಸ್ಲೆ ಹೇಳಿದ್ದಾರೆ.
ಕೋಲ್ಕತ್ತದಿಂದ ಬೆದರಿಕೆ ಇ–ಮೇಲ್ ಬಂದಿದ್ದು, ಆ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.