ADVERTISEMENT

ರೈತರು, ವಿರೋಧ ಪಕ್ಷಗಳ ಅಪೇಕ್ಷೆಗಳೇ 'ಕೃಷಿ ಕಾಯ್ದೆ ತಿದ್ದುಪಡಿ': ಪ್ರಧಾನಿ ಮೋದಿ

ಏಜೆನ್ಸೀಸ್
Published 15 ಡಿಸೆಂಬರ್ 2020, 16:47 IST
Last Updated 15 ಡಿಸೆಂಬರ್ 2020, 16:47 IST
ಪ್ರಧಾನಿ ನರೇಂದ್ರ ಮೋದಿ-ಸಾಂದರ್ಭಿಕ ಚಿತ್ರ
ಪ್ರಧಾನಿ ನರೇಂದ್ರ ಮೋದಿ-ಸಾಂದರ್ಭಿಕ ಚಿತ್ರ   

ಕಚ್‌: ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ವರ್ಷಗಳಿಂದ ಕೇಳುತ್ತಿದ್ದವುಗಳನ್ನೇ ಕೃಷಿ ಕಾಯ್ದೆಗಳತಿದ್ದುಪಡಿಗಳು ಒಳಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ 'ಕೃಷಿ ಕಾಯ್ದೆಗಳನ್ನು' ಸಮರ್ಥಿಸಿಕೊಂಡಿದ್ದಾರೆ.

ಮಂಗಳವಾರ ಕಚ್‌ನ ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಮಾತನಾಡಿದರು. 'ಭಾರತ ಸರ್ಕಾರವು ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ. ಅವರ ಕಳಕಳಿಗೆ ಸರ್ಕಾರ ಓಗೊಡಲಿದೆ' ಎಂದಿದ್ದಾರೆ.

'ವಿರೋಧ ಪಕ್ಷಗಳಲ್ಲಿ ಕುಳಿತಿರುವವರು ಹಾಗೂ ಇಂದು ರೈತರ ಹಾದಿ ತಪ್ಪಿಸುತ್ತಿರುವವರು, ಅವರ ಆಡಳಿತಾವಧಿಯಲ್ಲಿ ಈ ಕೃಷಿ ಕಾಯ್ದೆ ತಿದ್ದುಪಡಿಗಳ ಕಡೆಗೆ ಒಲವು ತೋರಿದ್ದರು. ಆಗಿನ ಸರ್ಕಾರ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಈಗ ದೇಶವು ಐತಿಹಾಸಿಕ ಹೆಜ್ಜೆ ಇಟ್ಟಿರುವ ಸಮಯದಲ್ಲಿ ಅದೇ ಜನರು ರೈತರ ಹಾದಿ ತಪ್ಪಿಸುತ್ತಿದ್ದಾರೆ' ಎಂದು ಮೋದಿ ಆರೋಪಿಸಿದ್ದಾರೆ.

ADVERTISEMENT

'ರೈತರನ್ನು ಗೊಂದಲಕ್ಕೀಡು ಮಾಡಲು ದೆಹಲಿಯ ಸುತ್ತಮುತ್ತಲು ಪಿತೂರಿ ನಡೆಯುತ್ತಿದೆ. ಹೊಸ ಕೃಷಿ ಕಾಯ್ದೆ ತಿದ್ದುಪಡಿಗಳಿಂದ ರೈತರ ಭೂಮಿಯನ್ನು ಮತ್ತೊಬ್ಬರು ಆಕ್ರಮಿಸಿಕೊಳ್ಳುತ್ತಾರೆ ಎಂದು ಬೆದರಿಕೆ ಉಂಟು ಮಾಡಲಾಗಿದೆ. ಡೈರಿಯೊಂದು ನಿಮ್ಮಿಂದ ಹಾಲು ಸಂಗ್ರಹಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ ಎಂದಿಟ್ಟುಕೊಳ್ಳಿ, ಅವರು ನಿಮ್ಮ ಜಾನುವಾರುಗಳನ್ನೂ ತೆಗೆದುಕೊಂಡು ಹೋಗುವರೇ?' ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.