ನವದೆಹಲಿ: ₹3,600 ಕೋಟಿಯ ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಜೇಮ್ಸ್ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್, ಸಿಬಿಐನಿಂದ ಪ್ರತಿಕ್ರಿಯೆ ಕೇಳಿದೆ.
4 ವಾರಗಳಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಪಿ.ಬಿ. ವರಾಳೆ ಅವರಿದ್ದ ವಿಭಾಗೀಯ ಪೀಠ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದಲ್ಲಿ ತಮಗೆ ಜಾಮೀನು ನೀಡಲು ನಿರಾಕರಿಸಿದ ಸೆಪ್ಟೆಂಬರ್ 25ರ ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಜೇಮ್ಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅಗಸ್ಟಾ ವೆಸ್ಟ್‌ಲ್ಯಾಂಡ್‌ನಿಂದ 12 ವಿವಿಐಪಿ ಹೆಲಿಕಾಪ್ಟರ್ ಖರೀದಿಗೆ ಸಂಬಂಧಿಸಿದ ಹಗರಣ ಇದಾಗಿದೆ.
ಬ್ರಿಟಿಷ್ ಪ್ರಜೆ ಜೇಮ್ಸ್ ಅವರನ್ನು 2018ರ ಡಿಸೆಂಬರ್‌ನಲ್ಲಿ ದುಬೈನಿಂದ ಭಾರತಕ್ಕೆ ಹಸ್ತಾಂತರ ಮಾಡಲಾಗಿತ್ತು. ಬಳಿಕ, ಅವರನ್ನು ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.