ADVERTISEMENT

ವೆಸ್ಟ್‌ಲ್ಯಾಂಡ್‌ ಹಗರಣ: ಫೆ7ರಂದು ಆರೋಪಿ ಜೇಮ್ಸ್‌ ಜಾಮೀನು ಅರ್ಜಿ ವಿಚಾರಣೆ

ಪಿಟಿಐ
Published 2 ಫೆಬ್ರುವರಿ 2023, 14:07 IST
Last Updated 2 ಫೆಬ್ರುವರಿ 2023, 14:07 IST
ಕ್ರಿಸ್ಟಿಯನ್‌ ಮೈಕಲ್‌ ಜೇಮ್ಸ್‌
ಕ್ರಿಸ್ಟಿಯನ್‌ ಮೈಕಲ್‌ ಜೇಮ್ಸ್‌   

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾ‍ಪ್ಟರ್‌ ಹಗರಣದ ಪ್ರಮುಖ ಆರೋಪಿ ಕ್ರಿಸ್ಟಿಯನ್‌ ಮೈಕಲ್‌ ಜೇಮ್ಸ್‌ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಇದೇ 7ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಮಧ್ಯವರ್ತಿಯಾಗಿರುವ ಮೈಕಲ್‌ ವಿರುದ್ಧ ಸಿಬಿಐ ಹಾಗೂ ಇ.ಡಿ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿವೆ. ಈ ಪ್ರಕರಣಗಳಲ್ಲಿ ಜಾಮೀನು ಕೋರಿ ಆರೋಪಿ ಸಲ್ಲಿಸಿರುವ ಅರ್ಜಿಗಳು ಗುರುವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಹಾಗೂ ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠದ ಎದುರು ವಿಚಾರಣೆಗೆ ನಿಗದಿಯಾಗಿದ್ದವು. ಇದೇ 7ರಂದು ಅರ್ಜಿಗಳ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿತು.

ಆರೋಪಿಯ ಜಾಮೀನು ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯವು ಕಳೆದ ವರ್ಷದ ಮೇ ತಿಂಗಳಲ್ಲಿ ಇ.ಡಿ ಹಾಗೂ ಸಿಬಿಐಗೆ ಸೂಚಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.