ತಿರುವನಂತಪುರ: ‘ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಾಂಸದ ಬೆಲೆಗಳು ಗಗನಕ್ಕೇರಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳುಕೇರಳದ ಒಟ್ಟು 958 ಮಾಂಸದ ಅಂಗಡಿಗಳನ್ನು ಪರಿಶೀಲನೆ ನಡೆಸಿದ್ದಾರೆ’ ಎಂದು ಕೇರಳ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಜಿ.ಆರ್ ಅನಿಲ್ ತಿಳಿಸಿದ್ದಾರೆ.
‘ದರ ಪಟ್ಟಿಯನ್ನು ಪ್ರದರ್ಶಿಸದ ಮಾಂಸದ ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ ಗ್ರಾಹಕರಿಗೆ ದುಬಾರಿ ದರದಲ್ಲಿ ಮಾಂಸ ಮಾರಾಟ ಮಾಡುತ್ತಿರುವವರಿಗೆ ದರ ಕಡಿಮೆ ಮಾಡುವಂತೆ ಸೂಚಿಸಲಾಗಿದೆ’ ಎಂದು ಸಚಿವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
‘ಕೋವಿಡ್ ಮಾರ್ಗಸೂಚಿಗಳು ಮತ್ತು ಸ್ವಚ್ಛತಾ ಕ್ರಮಗಳನ್ನು ಪಾಲಿಸುವಂತೆ ಅಂಡಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲೂ ಅಧಿಕಾರಿಗಳು ಅಂಗಡಿಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಉತ್ಪನ್ನಗಳ ತೂಕ ಮತ್ತು ಬೆಲೆಯಲ್ಲಿ ಏರುಪೇರು ಕಂಡುಬಂದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು’ ಎಂದು ಅನಿಲ್ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.