ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸರಬ್‌ದೀಪ್ ಸಿಂಗ್ ವಿರ್ಕ್ ಸೇರಿದಂತೆ ರಾಜ್ಯದ ಹಲವಾರು ಪ್ರಮುಖರು ಶುಕ್ರವಾರ ಬಿಜೆಪಿ ಸೇರ್ಪಡೆಯಾದರು.
ಪಂಜಾಬ್ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಅವತಾರ್ ಸಿಂಗ್ ಝಿರಾ, ಕೈಗಾರಿಕೋದ್ಯಮಿ ಹರ್‌ಚರಣ್ ಸಿಂಗ್ ರನೌತ್ ಮತ್ತು ಎಸ್‌ಎಡಿ ಮಾಜಿ ನಾಯಕ ಸರಬ್ಜಿತ್ ಸಿಂಗ್ ಮಕ್ಕರ್ ಬಿಜೆಪಿ ಸೇರಿದರು. ಕೇಂದ್ರ ಸಚಿವ ಹಾಗೂ ಪಂಜಾಬ್‌ನ ಬಿಜೆಪಿ ಘಟಕದ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್ ಅವರು ಇವರೆಲ್ಲರನ್ನೂ ಪಕ್ಷಕ್ಕೆ ಬರಮಾಡಿಕೊಂಡರು.
ಓದಿ:ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಸೇರ್ಪಡೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.