ADVERTISEMENT

ತ್ರಿವಳಿ ತಲಾಖ್‌ ನಿಷೇಧಕ್ಕೆ ಒಂದು ವರ್ಷ: ಪ್ರಧಾನಿ ಮೋದಿಗೆ ಧನ್ಯವಾದ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 14:05 IST
Last Updated 29 ಜುಲೈ 2020, 14:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ತ್ರಿವಳಿ ತಲಾಖ್‌’ ನಿಷೇಧ ಕಾಯ್ದೆ ಜಾರಿಯಾಗಿ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ಕಾನೂನನ್ನು ಶ್ಲಾಘಿಸಿ, ಮುಸ್ಲಿಂ ಮಹಿಳೆಯರು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿರುವ ವಿಡಿಯೊವನ್ನುಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಬುಧವಾರ ಹಂಚಿಕೊಂಡಿದ್ದಾರೆ.

ಕಾಯ್ದೆ ಜಾರಿಗೊಂಡ ದಿನವನ್ನು‘ಮುಸ್ಲಿಂ ಮಹಿಳಾ ಹಕ್ಕುಗಳ ದಿನ’ ಎಂಬ ಹೆಸರಿನಲ್ಲಿ ಆಚರಿಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಕೇಂದ್ರ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.ಕೇಂದ್ರ ಸಚಿವರಾದ ರವಿಶಂಕರ್‌ ಪ್ರಸಾದ್‌, ಸ್ಮೃತಿ ಇರಾನಿ ಮತ್ತು ನಖ್ವಿ ಅವರು ದೇಶದಾದ್ಯಂತ ಇರುವ ಮುಸ್ಲಿಂ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಚಿವ ನಖ್ವಿ ಅವರು ತಮ್ಮ ಟ್ವಿಟರ್‌, ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ದೇಶದ ಮುಸ್ಲಿಂ ಮಹಿಳೆಯರು ಪ್ರಧಾನಿಗೆ ಧನ್ಯವಾದ ಸಲ್ಲಿಸಿರುವ ವಿಡಿಯೊವನ್ನು ‘ಥ್ಯಾಂಕ್ಸ್‌ಮೋದಿಭಾಯಿ‌ಜಾನ್‌’ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿಹಂಚಿಕೊಂಡಿದ್ದಾರೆ.

ADVERTISEMENT

ವಿವಿಧ ರಾಜ್ಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮತ್ತು ಮಹಿಳಾ ಮೋರ್ಚಾ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.