ADVERTISEMENT

ಸ್ವಗ್ರಾಮದಲ್ಲಿ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 7:52 IST
Last Updated 26 ನವೆಂಬರ್ 2020, 7:52 IST
ಅಹ್ಮದ್ ಪಟೇಲ್
ಅಹ್ಮದ್ ಪಟೇಲ್   

ಅಹಮದಾಬಾದ್‌: ಬುಧವಾರ ನಿಧನರಾದ ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ಗ್ರಾಮದಲ್ಲಿ ಗುರುವಾರ ಪಕ್ಷದ ಹಿರಿಯ ಮುಖಂಡರು ಮತ್ತು ಅಪಾರ ಸಂಖ್ಯೆಯ ಬೆಂಬಲಿಗರ ಸಮ್ಮುಖದಲ್ಲಿ ನೆರವೇರಿತು.

ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

‘ಪಟೇಲ್ ಅವರ ಆಶಯಕ್ಕೆ ಅನುಗುಣವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ, ಅವರ ತಾಯಿಯ ಗೋರಿ ಪಕ್ಕದಲ್ಲೇ ಅವರನ್ನೂ ದಫನ್ ಮಾಡಲಾಯಿತು‘ ಎಂದು ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಶಿ ಹೇಳಿದರು.

ADVERTISEMENT

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ನಡುವೆಯೂ, ದಕ್ಷಿಣ ಗುಜರಾತ್‌ನ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಅವರ ಬೆಂಬಲಿಗರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.