ಅಹಮದಾಬಾದ್: ಏರ್ ಇಂಡಿಯಾ ವಿಮಾನ AI–171 ಪತನವಾದ ಬಳಿಕ ಬಂದ್ ಆಗಿದ್ದ ಅಹಮದಾಬಾದ್ ವಿಮಾನ ನಿಲ್ದಾಣವನ್ನು ತೆರೆಯಲಾಗಿದ್ದು, ಸೀಮಿತ ವಿಮಾನಗಳು ಕಾರ್ಯಾಚರಣೆ ನಡೆಸಲಿವೆ ಎಂದು ವಿಮಾನ ನಿಲ್ದಾಣದ ವಕ್ತಾರ ಹೇಳಿದ್ದಾರೆ.
‘ಸರ್ದಾರ್ ವಲಭಭಾಯಿ ಪಟೇಲ್ ವಿಮಾನ ನಿಲ್ದಾಣವನ್ನು ತೆರೆಯಲಾಗಿದೆ. ವಿಮಾನ ನಿಲ್ದಾಣಕ್ಕೆ ಬರುವ ಮೊದಲು ಪ್ರಯಾಣಿಕರು ಹೊಸ ಮಾಹಿತಿಯನ್ನು ಅನುಸರಿಸಿ’ ಎಂದು ವಿಮಾನ ನಿಲ್ದಾಣದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಹಮದಾಬಾದ್‌ನಲ್ಲಿ ವಿಮಾನ ನಿಲ್ದಾಣ ಬಂದ್ ಆಗಿದ್ದ ಕಾರಣ ಇಂದು (ಗುರುವಾರ) ಮಧ್ಯಾಹ್ನ ಕೋಲ್ಕತ್ತದಿಂದ ಅಹಮದಾಬಾದ್‌ಗೆ ಹೊರಟಿದ್ದ ಇಂಡಿಗೊ ವಿಮಾನವೊಂದು ಕೋಲ್ಕತ್ತಕ್ಕೆ ವಾಪಸ್ಸಾಗಿದೆ.
ಅಹಮದಾಬಾದ್‌ನಿಂದ ಇಂಗ್ಲೆಂಡ್‌ನ ಲಂಡನ್‌ನ ಗ್ಯಾಟ್‌ವಿಕ್‌ಗೆ ಹೊರಟಿದ್ದ ಏರ್ ಇಂಡಿಯಾ AI–171 ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ. ಸದ್ಯದ ಮಾಹಿತಿ ಪ್ರಕಾರ ಸ್ಥಳದಲ್ಲಿರುವ ಮಿಲಿಟಿರಿ ಅಧಿಕಾರಿಗಳು ವಿಮಾನದಲ್ಲಿದ್ದ 242 ಜನರೂ ದುರಂತದಲ್ಲಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.