ಅಹಮದಾಬಾದ್:ಇಲ್ಲಿನ ಶ್ರೇಯ್ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಕೋವಿಡ್ ರೋಗಿಗಳು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಆಡಳಿತಾಧಿಕಾರಿ ಭಾರತ್ ಮಹಂತ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.
ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅಲ್ಲಿ ಯಾವುದೇ ಫೈರ್ ಅಲಾರಾಂ ಕೂಡ ಇರಲಿಲ್ಲ. ವಾರ್ಡ್‌ನಲ್ಲಿದ್ದ ಕಿಟಕಿಗಳಿಗೆ ಮೊಳೆ ಹೊಡೆಯಲಾಗಿತ್ತು. ಆದ್ದರಿಂದ ಕೋವಿಡ್ ರೋಗಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಆಸ್ಪತ್ರೆಯ ಆಡಳಿತಾಧಿಕಾರಿ ವಿರುದ್ಧ ನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಎಂ.ಎ. ಪಟೇಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.