ಅಹಮದಾಬಾದ್: ಏರ್‌ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ 270 ಜನರ ಪೈಕಿ, ಈವರೆಗೆ 162 ಸಂತ್ರಸ್ತರ ಗುರುತನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಮಾಡಲಾಗಿದೆ. ಈ ಪೈಕಿ 120 ಮಂದಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘ್ವಿ ಅವರು ಮಂಗಳವಾರ ತಿಳಿಸಿದರು.
ಮೃತರ ಡಿಎನ್‌ಎ ಹೊಂದಿಕೆ ಪ್ರಕ್ರಿಯೆಯು ಬುಧವಾರ ಬೆಳಿಗ್ಗೆ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಸೂಪರಿಂಟೆಂಡೆಂಟ್ ರಾಕೇಶ್ ಜೋಶಿ ಅವರು ತಿಳಿಸಿದರು.
ಗುರುತು ಪತ್ತೆಗಾಗಿ 250 ಮೃತದೇಹಗಳ ಮಾದರಿಯನ್ನು ಪಡೆಯಲಾಗಿದೆ. ಮೃತದೇಹಗಳು ಗುರುತು ಸಿಗದಷ್ಟು ಸುಟ್ಟು ಕರಕಲಾಗಿರುವ ಕಾರಣ ಡಿಎನ್‌ಎ ಹೊಂದಿಕೆ ಪ್ರಕ್ರಿಯೆಯು ಕ್ಲಷ್ಟಕರವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.