ಅಹಮದಾಬಾದ್: ಕಳೆದ ವಾರ ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಡಿಎನ್‌ಎ ಪರೀಕ್ಷೆ ಮೂಲಕ ಈವರೆಗೆ 190 ಮಂದಿಯ ಗುರುತು ಪತ್ತೆ ಮಾಡಲಾಗಿದ್ದು,159 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಜೂನ್ 12ರಂದು 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ ಎಐ-171 ವಿಮಾನವು ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾಗಿತ್ತು. ವಿಮಾನವು ವೈದ್ಯಕೀಯ ಕಾಲೇಜು ವಸತಿ ಸಂಕೀರ್ಣಕ್ಕೆ ಡಿಕ್ಕಿ ಹೊಡೆದು, ವಿಮಾನದಲ್ಲಿದ್ದ ಒಬ್ಬರನ್ನು ಹೊರತುಪಡಿಸಿ ಉಳಿದೆಲ್ಲರೂ ಮೃತಪಟ್ಟಿದ್ದರು. ಕಟ್ಟಡದಲ್ಲಿ ಮತ್ತು ಸಮೀಪದಲ್ಲಿದ್ದ ಸುಮಾರು 29 ಮಂದಿ ಸಹ ಸಾವಿಗೀಡಾಗಿದ್ದರು.
ಅನೇಕ ಶವಗಳು ಗುರುತಿಸಲಾಗದಷ್ಟು ಸುಟ್ಟುಹೋಗಿದ್ದು, ಗುರುತು ಪತ್ತೆಗೆ ಅಧಿಕಾರಿಗಳು ಡಿಎನ್‌ಎ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ.
ಬುಧವಾರ ಬೆಳಿಗ್ಗೆವರೆಗೆ, 190 ಡಿಎನ್‌ಎ ಮಾದರಿಗಳನ್ನು ಹೊಂದಿಸಲಾಗಿದೆ. ಈ ಪೈಕಿ 159 ಶವಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಇತರ ಶವಗಳ ಡಿಎನ್‌ಎ ಮಾದರಿಗಳನ್ನು ಹೊಂದಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.