ADVERTISEMENT

Ahmedabad Plane Crash | ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ ಪೊಲೀಸರು

ಪಿಟಿಐ
Published 15 ಜೂನ್ 2025, 4:05 IST
Last Updated 15 ಜೂನ್ 2025, 4:05 IST
ಏರ್‌ ಇಂಡಿಯಾ ವಿಮಾನ ದುರಂತ
ಏರ್‌ ಇಂಡಿಯಾ ವಿಮಾನ ದುರಂತ   

ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತ ಕುರಿತು ಮೇಘಾನಿ ನಗರದ ಪೊಲೀಸರು ಆಕಸ್ಮಿಕ ಸಾವು ಪ್ರಕರಣ (UD/0019/2025) ದಾಖಲಿಸಿಕೊಂಡಿದ್ದಾರೆ.

ಇದು ಎಫ್‌ಐಆರ್ ಅಲ್ಲ. ಬದಲಾಗಿ ಪೊಲೀಸ್ ಠಾಣೆಯ ಡೈರಿಯಲ್ಲಿ ಘಟನೆಯ ನೋಂದಣಿಯಾಗಿದ್ದು, ತನಿಖೆಯ ಫಲಿತಾಂಶದ ಆಧಾರದ ಮೇಲೆ ಇದನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 194ರ ಅಡಿಯಲ್ಲಿ ಎಫ್‌ಐಆರ್ ಆಗಿ ಪರಿವರ್ತಿಸಬಹುದು. ಆತ್ಮಹತ್ಯೆ, ಅಸ್ವಾಭಾವಿಕ ಸಾವು ಅಥವಾ ಅನುಮಾನಾಸ್ಪದ ಸಾವುಗಳಂತಹ ಆಕಸ್ಮಿಕ ಸಾವುಗಳ ಪ್ರಕರಣಗಳಲ್ಲಿ ಪಂಚನಾಮ ನಡೆಸಲು ಪೊಲೀಸರು ತಕ್ಷಣವೇ ಮ್ಯಾಜಿಸ್ಟ್ರೇಟ್‌ಗೆ ತಿಳಿಸಬೇಕೆಂದು ನಿಯಮವಾಗಿದೆ. ಅಂತಹ ಪ್ರಕರಣಗಳನ್ನು ಪೊಲೀಸರು ಆಕಸ್ಮಿಕ ಸಾವು ಎಂದು ಕರೆಯುತ್ತಾರೆ.

ವಿಮಾನ ದುರಂತದಲ್ಲಿ ಒಟ್ಟು 270 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ‌. ಈ ಪೈಕಿ ವಿಮಾನದಲ್ಲಿದ್ದ 241 ಮಂದಿ, ಬಿ.ಜೆ. ವೈದ್ಯಕೀಯ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು, ವೈದ್ಯರ ಕುಟುಂಬದ ನಾಲ್ವರು ಸದಸ್ಯರು, ಚಹಾ ಮಾರಾಟಗಾರರ ಕುಟುಂಬ ಸದಸ್ಯರು ಸೇರಿದಂತೆ ಇತರರು ಸಾವಿಗೀಡಾಗಿದ್ದಾರೆ.

ADVERTISEMENT

ಗುರುವಾರ ಮಧ್ಯಾಹ್ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸೇರಿದಂತೆ ಕನಿಷ್ಠ 270 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.