ADVERTISEMENT

Plane Crash: ತನಿಖಾಧಿಕಾರಿ ನೇಮಕ ಮಾಡದ AAIB; ಅಕ್ಷಮ್ಯ ಅಪರಾಧ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜೂನ್ 2025, 6:23 IST
Last Updated 26 ಜೂನ್ 2025, 6:23 IST
<div class="paragraphs"><p>ವಿಮಾನದ ಅವಶೇಷ ಸಾಗಿಸುತ್ತಿರುವುದು</p></div>

ವಿಮಾನದ ಅವಶೇಷ ಸಾಗಿಸುತ್ತಿರುವುದು

   

(ಪಿಟಿಐ ಚಿತ್ರ)

ನವದೆಹಲಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾಗಿ ಎರಡು ವಾರ ಕಳೆದರೂ ಇಲ್ಲಿಯವರೆಗೆ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡದೇ ಇರುವುದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಆರೋಪಿಸಿದೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ಪೋಸ್ಟ್ ಮಾಡಿದ್ದಾರೆ.

'ಅಹಮದಾಬಾದ್‌ನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿ ಹದಿನೈದು ದಿನಗಳು ಕಳೆದರೂ ವಿಮಾನ ಅಪಘಾತ ತನಿಖಾ ಸಂಸ್ಥೆಯು (ಎಎಐಬಿ) ಇನ್ನೂ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡಿಲ್ಲ ಎಂದು ವರದಿಯಾಗಿದೆ. ಇದು ಅಕ್ಷಮ್ಯ ಅಪರಾಧ' ಎಂದು ಹೇಳಿದ್ದಾರೆ.

ಈ ಸಂಬಂಧ ವಿಮಾನ ಅಪಘಾತ ತನಿಖಾ ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಜೂನ್‌ 12ರಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ 'ಏರ್‌ ಇಂಡಿಯಾ' ಸಂಸ್ಥೆಯ ವಿಮಾನ ಟೆಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಮೀಪದ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ ಕಟ್ಟಡದ ಮೇಲೆ ಪತನಗೊಂಡಿತ್ತು.

ಈ ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ 241 ಮಂದಿ ಸೇರಿದಂತೆ 270 ಮಂದಿ ಮೃತಪಟ್ಟಿದ್ದರು. ಓರ್ವ ಪ್ರಯಾಣಿಕ ಪವಾಡ ಸದೃಶ ಪಾರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.