ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ
–ಪಿಟಿಐ ಚಿತ್ರ
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 270 ಜನರು ಸಾವನ್ನಪ್ಪಿದ ನಾಲ್ಕು ದಿನಗಳ ನಂತರ, ಡಿಎನ್‌ಎ ಹೊಂದಾಣಿಕೆಯ ಮೂಲಕ ಇದುವರೆಗೆ 87 ಬಲಿಪಶುಗಳನ್ನು ಗುರುತಿಸಲಾಗಿದೆ ಮತ್ತು 47 ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಈವರೆಗೆ ಗುರುತು ಪತ್ತೆ ಮಾಡಲಾದ ಸಂತ್ರಸ್ತರು ರಾಜಸ್ಥಾನ ಮತ್ತು ಗುಜರಾತ್‌ನ ವಿವಿಧ ಪ್ರದೇಶದವರು ಎಂದು ಅವರು ತಿಳಿಸಿದರು. ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ ಅಥವಾ ಛಿದ್ರವಾಗಿವೆ. ಆದ್ದರಿಂದ ಅಧಿಕಾರಿಗಳು ಡಿಎನ್‌ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡುತ್ತಿದ್ದಾರೆ. ಈ ಪ್ರಕ್ರಿಯೆಗಾಗಿ 230 ತಂಡಗಳನ್ನು ರಚಿಸಲಾಗಿದೆ.
ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದ 242 ಮಂದಿಯ ಪೈಕಿ 241 ಮಂದಿ ಮೃತಪಟ್ಟಿದ್ದಾರೆ. ವಿಮಾನ ಡಿಕ್ಕಿ ಹೊಡೆದ ಸ್ಥಳದಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳೂ ಸೇರಿ 29 ಮಂದಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.