ಭುಜ್: ಅಹಮದಾಬಾದ್‌ನ ವಿಮಾನ ದುರಂತದಲ್ಲಿ ಮೃತಪಟ್ಟ ಅನಿಲ್ ಖಿಮಾನಿ (35) ಅವರ ಅಂತ್ಯಕ್ರಿಯೆಯನ್ನು ಗುಜರಾತಿನ ಕಚ್ ಜಿಲ್ಲೆಯಲ್ಲಿ ನೆರವೇರಿಸಲಾಯಿತು. ಇದರೊಂದಿಗೆ ವಿಮಾನ ಅಪಘಾತದಲ್ಲಿ ಮೃತಪಟ್ಟ ಎಲ್ಲರ ಅಂತ್ಯಕ್ರಿಯೆ ನಡೆದಂತಾಗಿದೆ.
ವಿಮಾನ ಅಪಘಾತವಾದ ಎರಡು ವಾರಗಳ ಬಳಿಕ ಅನಿಲ್ ಅವರ ದೇಹವನ್ನು ಡಿಎನ್‌ಎ ಪರೀಕ್ಷೆಗಳ ಮೂಲಕ ಗುರುತಿಸಿ, ಅವರ ಕುಟುಂಬಕ್ಕೆ ಶುಕ್ರವಾರ ಸಂಜೆ ಹಸ್ತಾಂತರಿಸಲಾಗಿತ್ತು.
ಮೊದಲಿಗೆ ತಂದೆ, ಆ ಬಳಿಕ ತಾಯಿಯ ಡಿಎನ್ಎ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ ಬಳಿಕ ಅವರ ಪುತ್ರನ ದೇಹವನ್ನು ದೃಢಪಡಿಸಲಾಯಿತು.
ಜೂನ್ 12ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಲು ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘಾನಿನಗರದ ವೈದ್ಯಕೀಯ ಕಾಲೇಜಿನ ಸಂಕೀರ್ಣದಲ್ಲಿದ್ದ ಕಟ್ಟಡಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು, ಸಿಬ್ಬಂದಿ ಹಾಗೂ ಘಟನಾ ಸ್ಥಳದಲ್ಲಿದ್ದ 19 ಮಂದಿ ಮೃತಪಟ್ಟಿದ್ದರು. ಪ್ರಯಾಣಿಕರೊಬ್ಬರು ಅಪಾಯದಿಂದ ಪಾರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.