ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ
(ಪಿಟಿಐ ಚಿತ್ರ)
ಅಹಮದಾಬಾದ್: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಭೇಟಿ ಕೊಟ್ಟಿರುವ ಪ್ರಧಾನಿ ಮೋದಿ, ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನವನ್ನು ನುಡಿದಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 'ಇಂದು ಅಹಮದಾಬಾದ್‌ನಲ್ಲಿ ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ವಿನಾಶದ ಈ ದೃಶ್ಯವು ತೀವ್ರ ನೋವನ್ನುಂಟು ಮಾಡಿದೆ' ಎಂದು ಹೇಳಿದ್ದಾರೆ.
'ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತ ನಮ್ಮೆಲ್ಲರನ್ನು ದಿಗ್ಬ್ರಾಂತಗೊಳಿಸಿದೆ. ಹೃದಯವಿದ್ರಾವಕ ರೀತಿಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ' ಎಂದು ಹೇಳಿದ್ದಾರೆ.
ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ನಂತರ ಸಚಿವರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ.
ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೂ ಭೇಟಿ ನೀಡಿರುವ ಪ್ರಧಾನಿ ಮೋದಿ ಗಾಯಗೊಂಡವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.