ADVERTISEMENT

Ahmedabad plane crash | ವಿಜಯ್ ರೂಪಾನಿ ಮೃದು ಭಾಷಿ ನಾಯಕ: ಚಂದ್ರಬಾಬು ನಾಯ್ಡು

ಪಿಟಿಐ
Published 13 ಜೂನ್ 2025, 6:43 IST
Last Updated 13 ಜೂನ್ 2025, 6:43 IST
   

ಅಮರಾವತಿ: ಅಹಮದಾಬಾದ್‌ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಜನಪರ ನಾಯಕರಾಗಿದ್ದರು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಗುರುವಾರ ನಡೆದ ದುರಂತದಲ್ಲಿ ಏರ್ ಇಂಡಿಯಾ ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ ಕನಿಷ್ಠ 265 ಜನರು ಮೃತಪಟ್ಟಿದ್ದರು. ಅದೇ ವಿಮಾನದಲ್ಲಿ ವಿಜಯ್ ರೂಪಾನಿ ಅವರು ಕೂಡ ಪ್ರಯಾಣಿಸುತ್ತಿದ್ದರು.

ವಿಜಯ್ ರೂಪಾನಿ ಅವರು ಮೃದು ಭಾಷಿ ವ್ಯಕ್ತಿತ್ವದ ಜನಪರ ನಾಯಕರಾಗಿದ್ದರು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಂದ್ರಬಾಬು ನಾಯ್ಡು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ADVERTISEMENT

ಅಹಮದಾಬಾದ್‌ನಲ್ಲಿ ನಡೆದ ದುರ್ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ, ಮೃತರಿಗೆ ಹಾಗೂ ಅವರ ಕುಟುಂಬಕ್ಕೆ ತೀವ್ರ ಸಂತಾಪಗಳು ಎಂದಿದ್ದಾರೆ.

68 ವರ್ಷದ ಬಿಜೆಪಿ ಹಿರಿಯ ನಾಯಕ ವಿಜಯ್ ರೂಪಾನಿ ಅವರು 2016ರ ಆಗಸ್ಟ್‌ನಿಂದ 2021ರ ಸೆಪ್ಟೆಂಬರ್‌ವರೆಗೆ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರು. ಶಾಂತ ಸ್ವಭಾವ ಹಾಗೂ ಬಿಗಿ ಆಡಳಿತದಿಂದ ಗುರುತಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.