ಅಹಮದಾಬಾದ್: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ವಿದ್ಯಾರ್ಥಿ 10ನೇ ತರಗತಿಯ ವಿದ್ಯಾರ್ಥಿಯನ್ನು ಇರಿದು ಕೊಂದಿರುವ ಪ್ರಕರಣದ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ.
ಇರಿತಕ್ಕೆ ಒಳಗಾದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗಲಾಟೆ ಬಳಿಕ ಯುವಕರ ಗುಂಪೊಂದು ಸೆವೆಂತ್ ಡೇ ಅಡ್ವೆಂಟಿಸ್ಟ್ ಶಾಲೆಯನ್ನು ಧ್ವಂಸ ಮಾಡಿ ಸಿಬ್ಬಂದಿಯನ್ನು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾರವರು, ಕಾನೂನು ಸಂಘರ್ಷಕ್ಕೆ ಒಳಪಟ್ಟ ವಿದ್ಯಾರ್ಥಿಯನ್ನು ವಶಕ್ಕೆ ಪಡೆಯಲಾಗಿದೆ. ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಶಾಲೆಯಲ್ಲಿ ಅಪರಾಧ ಕೃತ್ಯಗಳು ನಡೆಯಬಾರದು. ಇದು ದುರದೃಷ್ಟಕರ ಘಟನೆಯಾಗಿದ್ದು, ನಾಗರಿಕ ಸಮಾಜಕ್ಕೆ ಎಚ್ಚರಿಕೆ ಸೂಚನೆ. ಘಟನೆಯ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಪನ್ಶೇರಿಯಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.