ADVERTISEMENT

ಅಹಮದಾಬಾದನ್ನು ಅದಾನಿಬಾದ್ ಎಂದು ಬದಲಿಸಿ: ಬಿಜೆಪಿಗೆ ಕೆಟಿಆರ್ ತಿರುಗೇಟು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜುಲೈ 2022, 4:18 IST
Last Updated 4 ಜುಲೈ 2022, 4:18 IST
 ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮರಾವ್
ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮರಾವ್   

ಹೈದರಾಬಾದ್: ಪಕ್ಷವು ಅಧಿಕಾರಕ್ಕೆ ಬಂದರೆ ಹೈದಾರಾಬಾದ್‌ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸುವುದಾಗಿ ಬಿಜೆಪಿ ಮುಖಂಡ ಹಾಗೂ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ರಘುವರ್ ದಾಸ್ ಹೇಳಿದ್ದಾರೆ.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮರಾವ್, ‘ಬಿಜೆಪಿ ಸರ್ಕಾರವು ಗುಜರಾತಿನ ಅಹಮದಾಬಾದ್ ಹೆಸರನ್ನು ಅದಾನಿಬಾದ್ ಎಂದು ಬದಲಿಸಲಿ’ ಎಂದು ವ್ಯಂಗ್ಯವಾಡಿದ್ದಾರೆ.

ಈ ಪ್ರತಿಕ್ರಿಯೆ ಮೂಲಕ ಕೈಗಾರಿಕೋದ್ಯಮಿ ಗೌತಮ್ ಅದಾನಿಯೊಂದಿಗೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಿಕಟ ಸಂಬಂಧದ ವಿರುದ್ಧ ಕೆಟಿಆರ್‌ ಹರಿಹಾಯ್ದಿದ್ದಾರೆ.

ADVERTISEMENT

ಹೈದರಾಬಾದ್‌ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನ, ‘ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜಧಾನಿಯ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸಲಾಗುವುದು‘ ಎಂದು ದಾಸ್ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.