ADVERTISEMENT

ತಾಂತ್ರಿಕ ಸಮಸ್ಯೆ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಹಾರಾಟ ರದ್ದು

ಪಿಟಿಐ
Published 24 ಜುಲೈ 2025, 14:15 IST
Last Updated 24 ಜುಲೈ 2025, 14:15 IST
ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಸಂಗ್ರಹ ಚಿತ್ರ – ಎಎಫ್‌ಪಿ)
ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಸಂಗ್ರಹ ಚಿತ್ರ – ಎಎಫ್‌ಪಿ)   

ನವದೆಹಲಿ: ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ಸಂಜೆ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣದಿಂದ ಹಾರಾಟವನ್ನು ರದ್ದು ಮಾಡಲಾಗಿದೆ. ವಿಮಾನದಲ್ಲಿ ಸುಮಾರು 160 ಪ್ರಯಾಣಿಕರಿದ್ದರು ಎಂದು ಮೂಲವೊಂದು ತಿಳಿಸಿದೆ.

ದೆಹಲಿಯಿಂದ ಹೊರಡಬೇಕಿದ್ದ ವಿಮಾನವೊಂದರ ಸಿಬ್ಬಂದಿ ಸಣ್ಣ ತಾಂತ್ರಿಕ ಸಮಸ್ಯೆಯನ್ನು ಉಲ್ಲೇಖಿಸಿ ಪ್ರಯಾಣವನ್ನು ಸುರಕ್ಷತೆಯ ದೃಷ್ಟಿಯಿಂದ ರದ್ದು ಮಾಡಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರ ಹೇಳಿದ್ದಾರೆ. ಕಾಕ್‌ಪಿಟ್‌ನಲ್ಲಿ ವೇಗವನ್ನು ಪ್ರದರ್ಶಿಸುವ ಪರದೆಗಳಲ್ಲಿ ದೋಷ ಕಂಡುಬಂದಿದ್ದರಿಂದ ಪೈಲಟ್ ಹಾರಾಟವನ್ನು ಅನ್ನು ರದ್ದು ಮಾಡಲು ನಿರ್ಧರಿಸಿದರು ಎಂದು ಮೂಲವೊಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT