
ಪಿಟಿಐ
ನವದೆಹಲಿ: ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ‘ಮುಖದ ದೃಢೀಕರಣ’ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಹೇಳಿದೆ.
ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಬಳಸಿ ಈಗಾಗಲೇ ಎನ್‌ಡಿಎ, ಎನ್‌ಎ, ಸಿಡಿಎಸ್ ಪರೀಕ್ಷೆಗಳ ಸಂದರ್ಭದಲ್ಲಿ ಅಭ್ಯರ್ಥಿಗಳ ‘ಮುಖದ ದೃಢೀಕರಣ’ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇದನ್ನು ಇನ್ನು ಮುಂದೆ ಎಲ್ಲ ಪರೀಕ್ಷೆಗಳಲ್ಲಿ ಜಾರಿಗೆ ತರಲಾಗುವುದು ಎಂದು ಯುಪಿಎಸ್‌ಸಿ ಪ್ರಕಟಣೆ ತಿಳಿಸಿದೆ.
ಪ್ರತಿ ಅಭ್ಯರ್ಥಿಯ ದೃಢೀಕರಣ ಪ್ರಕ್ರಿಯೆಗೆ ತೆಗೆದುಕೊಳ್ಳುತ್ತಿದ್ದ ಸಮಯವು ಎ.ಐ ತಂತ್ರಜ್ಞಾನದ ಬಳಕೆಯಿಂದ 8ರಿಂದ 10ಸೆಕೆಂಡ್‌ಗಳಿಗೆ ತಗ್ಗಿದೆ ಎಂದು ಯುಪಿಎಸ್‌ಸಿ ಅಧ್ಯಕ್ಷ ಅಜಯ್ ಕುಮಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.