
ನವದೆಹಲಿ: ಕೃತಕ ಬುದ್ಧಿಮತ್ತೆ (ಎ.ಐ) ಆಧರಿಸಿದ ನಕಲಿ ಸುದ್ದಿಗಳು ಹರಡುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ಸಂಸದೀಯ ಸಮಿತಿಯು, ತಪ್ಪು ಮಾಹಿತಿ ಹರಡುವ ವ್ಯಕ್ತಿ ಹಾಗೂ ಸಂಸ್ಥೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಕಾನೂನು ಹಾಗೂ ತಂತ್ರಜ್ಞಾನ ಪರಿಹಾರ ಕಂಡುಹಿಡಿಯಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೇತೃತ್ವದ ಮಾಹಿತಿ ಹಾಗೂ ತಂತ್ರಜ್ಞಾನ ಸ್ಥಾಯಿ ಸಮಿತಿಯು ತನ್ನ ಕರಡು ವರದಿಯಲ್ಲಿ, ಎ.ಐ ಆಧಾರಿತ ನಕಲಿ ಸುದ್ದಿಯನ್ನು ತಡೆಯಲು ಸಮತೋಲಿತ ವಿಧಾನ ಅಳವಡಿಕೆ, ತಪ್ಪು ಮಾಹಿತಿ ಪತ್ತೆಹಚ್ಚಲು ತಂತ್ರಜ್ಞಾನ ಅಳವಡಿಕೆ ಮಾಡಬೇಕು ಎಂದು ಶಿಫಾರಸು ಮಾಡಿದೆ. ಈ ವರದಿಯನ್ನು ಸಮಿತಿಯು ಈಗಾಗಲೇ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದೆ. ಸಂಸತ್‌ನ ಮುಂದಿನ ಅಧಿವೇಶನದಲ್ಲಿ ಇದು ಮಂಡನೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.