
ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ಸಂದರ್ಭ
ನವದೆಹಲಿ: ‘ಇಂಡಿಯಾ ಎ.ಐ ಇಂಪ್ಯಾಕ್ಟ್’ ಶೃಂಗಸಭೆಯ ಸಂದರ್ಭದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾರಣಕ್ಕೆ ಬಂಧಿಸಲಾಗಿದ್ದ ರಾಷ್ಟ್ರೀಯ ಯುವ ಕಾಂಗ್ರೆಸ್‌ನ (ಐವೈಸಿ) 9 ಮಂದಿ ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಕೃಷ್ಣ ಹರಿ, ನರಸಿಂಹ ಯಾದವ್, ಕುಂದನ್ ಕುಮಾರ್ ಯಾದವ್, ಅಜಯ್ ಕುಮಾರ್ ಸಿಂಗ್, ಜಿತೇಂದ್ರ ಸಿಂಗ್ ಯಾದವ್, ರಾಜಾ ಗುರ್ಜರ್, ಅಜಯ್ ಕುಮಾರ್ ವಿಮಲ್ ಅಲಿಯಾಸ್ ಬಂಟು, ಸೌರಭ್ ಸಿಂಗ್ ಮತ್ತು ಅರ್ಬಾಜ್ ಖಾನ್ ಅವರಿಗೆ ನ್ಯಾಯಾಧೀಶರಾದ ರವಿ ಅವರು ಜಾಮೀನು ಮಂಜೂರು ಮಾಡಿದ್ದಾರೆ.
ದೆಹಲಿಯ ಭಾರತ ಮಂಟಪಂನಲ್ಲಿ ಕೃತಕ ಬುದ್ಧಿಮತ್ತೆ ಕುರಿತ ಸಮ್ಮೇಳನದಲ್ಲಿ ತಮ್ಮ ಅಂಗಿ ಕಳಚಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧದ ಘೋಷಣೆ ಇದ್ದ ಬರಹಗಳನ್ನು ಪ್ರದರ್ಶಿಸಲಾಗಿತ್ತು. ಈ ಸಂಬಂಧ ಪೊಲೀಸರು ಅವರನ್ನು ಬಂಧಿಸಿದ್ದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.